‘ಅಶ್ವಿನಿ ನಕ್ಷತ್ರ’ ಧಾರಾವಹಿಯಿಂದ ಬಹಳ ಜನಪ್ರಿಯವಾಗಿದ್ದ ಮಯೂರಿ ಕ್ಯಾತರಿ, ಆ ನಂತರ ಕಿರುತೆರೆಗಿಂತ ಹಿರಿತೆರೆಯಲ್ಲೇ ಹೆಚ್ಚು ನಟಿಸಿದ್ದರು. ಹಲವು ಚಿತ್ರಗಳಲ್ಲಿ ನಟನೆ, ಮದುವೆ, ಮಗು ಅಂತ ಕೆಲವು ವರ್ಷಗಳ ಕಾಲ ಕಿರುತೆರೆಯಿಂದ ದೂರವೇ ಇದ್ದ ಮಯೂರಿ, ಇದೀಗ ಮತ್ತೆ ವಾಪಸ್ಸಾಗಿದ್ದಾರೆ.
ಕಲರ್ಸ್ ಕನ್ನಡದಲ್ಲಿ ಜುಲೈ 8ರಿಂದ ‘ನನ್ನ ದೇವ್ರು’ ಎಂಬ ಹೊಸ ಧಾರಾವಾಹಿ ಪ್ರಸಾರವಾಗುತ್ತಿದ್ದು, ಈ ಧಾರಾವಾಹಿಯ ಮೂಲಕ ಮಯೂರಿ ರೀಎಂಟ್ರಿ ಕೊಟ್ಟರೆ, ನರಸಿಂಹರಾಜು ಮೊಮ್ಮಗ ಅವಿನಾಶ್ ಇದೇ ಮೊದಲ ಬಾರಿಗೆ ಧಾರಾವಾಹಿಯೊಂದರಲ್ಲಿ ನಟಿಸುತ್ತಿದದಾರೆ. ಈ ಧಾರಾವಾಹಿಯು ಜುಲೈ 08ರಿಂದ ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ ಆರೂವರೆಗೆ ಪ್ರಸಾರವಾಗಲಿದೆ.
ಈ ಧಾರಾವಾಹಿಯಲ್ಲಿ ಮಯೂರಿ ಅವರದ್ದು ಸಣ್ಣ ಊರಿನ ಬಡ ನರ್ಸ್ ಪಾತ್ರ. ಊರೇ ಮೆಚ್ಚುವ ಉದ್ಯಮಿ ಸಚ್ಚಿದಾನಂದಗೆ ಸೇರಿದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಬಡ ಹುಡುಗಿ ಮಯೂರಿ. ಜನಾನುರಾಗಿ ಸಚ್ಚಿದಾನಂದನ ಇಪ್ಪತ್ತು ವರ್ಷದ ಮಗಳಿಗೆ ಅಪ್ಪನನ್ನು ಕಂಡರೆ ಇಷ್ಟವಿಲ್ಲ. ತನ್ನಿಂದ ದೂರಾಗಿ ಬದುಕುತ್ತಿರುವ ಮಗಳ ವಿಶ್ವಾಸವನ್ನು ಮರಳಿ ಗಳಿಸಿಕೊಳ್ಳಲು ಹಲುಬುತ್ತಿರುವ ಸಚ್ಚಿದಾನಂದನ ಬದುಕಲ್ಲಿ ಮಯೂರಿಯ ಪ್ರವೇಶವಾಗುತ್ತದೆ. ತಾನು ಆರಾಧಿಸುವ ಸಚ್ಚಿದಾನಂದನ ಬಾಳನ್ನು ಸರಿದಾರಿಗೆ ತರುವ ಹಾದಿಯಲ್ಲಿ ಮಯೂರಿ ಎದುರಿಸುವ ಸವಾಲುಗಳೇನು ಎಂಬುದೇ ಮುಂದಿನ ಕತೆ.

ಈ ಹಿಂದೆ ಕಲರ್ಸ್ ಕನ್ನಡ ವಾಹಿನಿಗೆ ‘ಒಲವಿನ ನಿಲ್ದಾಣ’ ಧಾರಾವಾಹಿಯನ್ನು ನಿರ್ಮಿಸಿದ್ದ ಶ್ರುತಿ ನಾಯ್ಡು, ‘ನನ್ನ ದೇವ್ರು’ ಧಾರಾವಾಹಿಯನ್ನು ನಿರ್ಮಿಸಿದ್ದಾರೆ. ಇತ್ತೀಚಿಗೆ ಬೆಳ್ಳಿತೆರೆಯ ಮೇಲೆ ಖಳನಟನಾಗಿ ಗಮನ ಸೆಳೆಯುತ್ತಿರುವ ರಮೇಶ್ ಇಂದಿರಾ ‘ನನ್ನ ದೇವ್ರು’ ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ.
ಅವಿನಾಶ್ ಮತ್ತು ಮಯೂರಿ ಜೊತೆಗೆ ಯುಕ್ತಾ ಮಲ್ನಾಡ್, ಸ್ವಾತಿ, ವಿ ಮನೋಹರ್, ರೇಖಾ ದಾಸ್, ನಿಶ್ಚಿತಾ ಗೌಡ, ಮಾಲತಿ ಸುಧೀರ್, ಯಮುನಾ ಶ್ರೀನಿಧಿ, ರವಿ ಬ್ರಹ್ಮ, ಅಭಿಷೇಕ್ ಶ್ರೀಕಾಂತ್ ಮುಂತಾದವರು ‘ನನ್ನ ದೇವ್ರು’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.
ಹತ್ತೂರ ಕಾಯುವವನಿಗೆ ಇವಳೇ ಕಾವಲು.
ನನ್ನ ದೇವ್ರು | ಜುಲೈ 8ರಿಂದ ಸಂಜೆ 6:30
#NannaDevru #Sacchidananda #Mayuri #Colorskannada #BannaHosadaagideBandhaBigiyaagide #ಕಲರ್ಫುಲ್ಕತೆ #colorfulstory #NDT pic.twitter.com/PMpp762Uil— Colors Kannada (@ColorsKannada) June 27, 2024


