ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರವನ್ನು ತಮಿಳಿನ ಕಲೈಪುಲಿ ಎಸ್. ಧನು ನಿರ್ಮಿಸುತ್ತಿದ್ದಾರೆ. ಸುದೀಪ್ ಅಭಿನಯದ 47ನೇ ಚಿತ್ರವನ್ನು ತಮಿಳಿನ ಸತ್ಯಜ್ಯೋತಿ ಫಿಲಂಸ್ ನಿರ್ಮಿಸಿ, ಚೇರನ್ ನಿರ್ದೇಶಿಸುತ್ತಿದ್ದಾರೆ. ಇಂದು ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಅವರ ಹೊಸ ಚಿತ್ರ ‘ಬಿಲ್ಲ ರಂಗ ಭಾಷಾ’ದ ಕಾನ್ಸೆಪ್ಟ್ ವೀಡಿಯೋ ಬಿಡುಗಡೆಯಾಗಿದ್ದು, ಈ ಚಿತ್ರವನ್ನು ‘ಹನುಮಾನ್’ ನಿರ್ಮಾಪಕರು ನಿರ್ಮಿಸುತ್ತಿದ್ದಾರೆ.
ಹೌದು, ಈ ವರ್ಷ ಬಿಡುಗಡೆಯಾಗಿ ದೊಡ್ಡ ಯಶಸ್ಸು ಕಂಡ ತೆಲುಗಿನ ‘ಹನುಮಾನ್’ ಚಿತ್ರವನ್ನು ನಿರ್ಮಿಸಿದ್ದ ಪ್ರೈಮ್ ಶೋ ಎಂಟರ್‍ಟೈನ್‍ಮೆಂಟ್ ಸಂಸ್ಥೆಯಡಿ ಕೆ. ನಿರಂಜನ್ ರೆಡ್ಡಿ ಮತ್ತು ಚೈತನ್ಯ ರೆಡ್ಡಿ ನಿರ್ಮಿಸುತ್ತಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ಏಕಕಾಲಕ್ಕೆ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿದೆ.
ಈ ಚಿತ್ರದ ಕುರಿತು ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಸುದೀಪ್, ‘ವಿಕ್ರಾಂತ್ ರೋಣ’ ಚಿತ್ರವನ್ನು ನಾವು ಮಾಡಿದ್ದೇ ‘ಬಿಲ್ಲ ರಂಗ ಭಾಷಾ’ ಮಾಡುವುದಕ್ಕೆ ಸಾಧ್ಯವೋ ಇಲ್ಲವೋ ಎಂದು ನೋಡುವುದಕ್ಕೆ ಎಂದು ಹೇಳಿದ್ದರು.
ಈ ಕುರಿತು ಮಾತನಾಡಿದ್ದ ಅವರು, ‘’ವಿಕ್ರಾಂತ್ ರೋಣ’ ಚಿತ್ರಕ್ಕೂ ಮೊದಲೃ ’ಬಿಲ್ಲ ರಂಗ ಭಾಷಾ’ ಪ್ರಾರಂಭವಾಗಬೇಕಿತ್ತು. ಆ ಚಿತ್ರಕ್ಕೆ ಆರೇಳು ವರ್ಷಗಳಿಂದ ಕೆಲಸ ನಡೆಯುತ್ತಿದೆ. ‘ವಿಕ್ರಾಂತ್ ರೋಣ’ಗೂ ಮೊದಲೇ ಆ ಚಿತ್ರ ಮಾಡಬೇಕೆನ್ನುವ ಯೋಚನೆ ಇತ್ತು. ‘ವಿಕ್ರಾಂತ್ ರೋಣ’ ಚಿತ್ರವನ್ನು ನಾವು ಮಾಡಿದ್ದೇ ‘ಬಿಲ್ಲ ರಂಗ ಭಾಷಾ’ ಮಾಡುವುದಕ್ಕೆ ಸಾಧ್ಯವೋ ಇಲ್ಲವೋ ಎಂದು ನೋಡುವುದಕ್ಕೆ. ಏಕೆಂದರೆ, ನಮ್ಮ ಹತ್ತಿರ ದುಡ್ಡಿರಬಹುದು. ಆದರೆ, ಸಾಮರ್ಥ್ಯ ಇರುತ್ತದೋ ಇಲ್ಲವೋ ಗೊತ್ತಿರುವುದಿಲ್ಲ. ನಾವು ಏನೋ ಹೇಳೋಕೆ ಹೋಗಿ ಅದು ತೆರೆಯ ಮೇಲೆ ಜೋಕ್ ಆಗಿ ಕಾಣಿಸಬಹುದು. ಹಾಗಾಗಿ, ಮೊದಲು ಈ ಚಿತ್ರ ಆಗುತ್ತಾ ಎಂದು ಗೊತ್ತಾಗಬೇಕಿದ್ದರೆ, ಬೇರೆ ಏನಾದರೂ ಮಾಡಬೇಕು. ‘ವಿಕ್ರಾಂತ್ ರೋಣ’ ಮಾಡಿದ್ದರಿಂದ ನಮ್ಮ ಸಾಮರ್ಥ್ಯ ಅರ್ಥವಾಯಿತು’ ಎಂದು ಸುದೀಪ್ ಹೇಳಿದ್ದರು.
‘ಬಿಲ್ಲ ರಂಗ ಭಾಷಾ’ ಚಿತ್ರವು ತಮ್ಮ ಮತ್ತು ಅನೂಪ್ ಚಿತ್ರಜೀವನದಲ್ಲೇ ದೊಡ್ಡ ಸಿನಿಮಾಗಳೆಂದಿರುವ ಅವರು, ‘ಆ ಚಿತ್ರಕ್ಕೆ ಸಾಕಷ್ಟು ರೀಸರ್ಚ್ ಕೆಲಸದ ಅವಶ್ಯಕತೆ ಇತ್ತು. ಅದಕ್ಕೆ ಸಾಕಷ್ಟು ಸಮಯವಾಯಿತು. ಅದು ಬಹಳ ಅಪರೂಪದ ಚಿತ್ರವಾಗಿರುತ್ತದೆ ಮತ್ತು ಹಲವು ಭಾಷೆಗಳಲ್ಲಿ ಮೂಡಬರುತ್ತದೆ. ಚಿತ್ರ ಸದ್ಯದಲ್ಲೇ ಶುರುವಾಗಲಿದೆ. ಚಿತ್ರೀಕರಣಕ್ಕೆ ಹೆಚ್ಚು ಸಮಯದ ಅಗತ್ಯವಿಲ್ಲ. 2025ರಲ್ಲಿ ಚಿತ್ರ ಬಿಡುಗಡೆ ಆಗಲಿದೆ’ ಎಂದಿದ್ದರು.
‘ಬಿಲ್ಲ ರಂಗ ಭಾಷಾ’ ಚಿತ್ರದಲ್ಲಿ ಸುದೀಪ್ ಹೊರತಾಗಿ ಯಾರೆಲ್ಲಾ ಇರುತ್ತಾರೆ, ಯಾರೆಲ್ಲಾ ಕೆಲಸ ಮಾಡುತ್ತಾರೆ, ಚಿತ್ರ ಯಾವಾಗ ಶುರು ಎಂಬ ವಿಷಯ ಇನ್ನಷ್ಟೇ ಹೊರಬೀಳಬೇಕಿದೆ.
#BRBMovie Joining hands with @KicchaSudeep sir & The Makers of Hanuman @primeshowtweets, to bring to you ‘A Tale From The Future’. Unveiling the Official Title Logo and Concept video on Baadshah’s Birthday. #BillaRangaBaasha – First Blood @Niran_Reddy @chaitanyaniran… pic.twitter.com/4oZQEkMUA7
— Anup Bhandari (@anupsbhandari) September 2, 2024
ವೆನಿಸ್ ಚಿತ್ರೋತ್ಸವದಲ್ಲಿ ‘ಘಟಶ್ರಾದ್ಧ’ ಪ್ರದರ್ಶನ; ಕಾಸರವಳ್ಳಿ ಅವರಿಗೆ ವಿಶೇಷ ಗೌರವ


