ಟ್ರೇಲರ್ ಮೂಲಕ ‘ಅನ್‍ಲಾಕ್’ ಮಾಡಿದ ರಾಘವ; ಚಿತ್ರ ಫೆ. 07ಕ್ಕೆ

ಚಂದನವನ, ಸಿನಿ ಸುದ್ದಿ

ಎರಡು ವರ್ಷಗಳ ಹಿಂದೆ ‘ಅನ್‍ಲಾಕ್‍ ರಾಘವ’ ಚಿತ್ರದ ಶೀರ್ಷಿಕೆಯನ್ನು ಬಿಡುಗಡೆ ಮಾಡಿದ್ದರು ಅಶ್ವಿನಿ ಪುನೀತ್‍ ರಾಜಕುಮಾರ್‍. ಈಗ ಅವರು ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರವು ಫೆಬ್ರವರಿ 07ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್‍ ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ.

‘ಅನ್‍ಲಾಕ್‍ ರಾಘವ’ ಚಿತ್ರ ಕುರಿತು ಮಾತನಾಡಿದ ದೀಪ್‍ ಮಧುವನಹಳ್ಳಿ, ‘ಇಂದು ಬೆಳಗಿನ ಜಾವ ಈ ಟ್ರೇಲರ್ ಸಿದ್ದವಾಯಿತು. ಅಂದುಕೊಂಡ ಸಮಯಕ್ಕೆ ಟ್ರೇಲರ್ ಬಿಡುಗಡೆಯಾಗಲು ಸಹಕಾರ ನೀಡಿದ ನನ್ನ ತಂಡಕ್ಕೆ ಧನ್ಯವಾದ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್ ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದಾರೆ. ಸತ್ಯಪ್ರಕಾಶ್‍ ಕಥೆ-ಚಿತ್ರಕಥೆ ಬರೆದಿದ್ದಾರೆ’ ಎಂದರು.

‘ಅನ್ ಲಾಕ್ ರಾಘವ’ ಚಿತ್ರ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳಿರುವ ಚಿತ್ರ ಎಂದ ಮಿಲಿಂದ್, ‘ಸಾಧು ಕೋಕಿಲ ಅವರು ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆದರೆ, ಈ ಚಿತ್ರದಲ್ಲಿ ಮಾಡಿರುವ ಪಾತ್ರ ಈವರೆಗೂ ಯಾವ ಚಿತ್ರದಲ್ಲೂ ಮಾಡಿಲ್ಲ. ನಮ್ಮ ಚಿತ್ರ ಇದೇ ಫೆಬ್ರವರಿ 7ರಂದು ತೆರೆಗೆ ಬರಲಿದೆ. ಕುಟುಂಬ ಸಮೇತ ಬಂದು ಚಿತ್ರ ನೋಡಿ’ ಎಂದರು.

‘ಉದ್ಘರ್ಷ’ ಸೇರಿದಂತೆ ನಾಲ್ಕು ಚಿತ್ರಗಳನ್ನು ನಿರ್ಮಿಸಿರುವ ಮಂಜುನಾಥ್‍ ದಾಸೇಗೌಡ, ‘ಚಿತ್ರತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಇತ್ತೀಚೆಗೆ ಟೆಕ್ನಿಕಲ್ ಶೋ ನಲ್ಲಿ ಚಿತ್ರವನ್ನು ನೋಡಿದಾಗ ತುಂಬಾ ಖುಷಿಯಾಯಿತು’ ಎಂದರು.

‘ರಾಚಯ್ಯ’ ಅಲ್ಲ ‘ಲ್ಯಾಂಡ್‍ಲಾರ್ಡ್’; ಬಡವರ ಪ್ರತಿನಿಧಿಯಾದ ‘ದುನಿಯಾ’ ವಿಜಯ್‍

Latest Posts

Discover more from KannadaScreens

Subscribe now to keep reading and get access to the full archive.

Continue reading