ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಚಿತ್ರವು ತನ್ನ ಹಾಡುಗಳು ಹಾಗೂ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದ್ದು, ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಪುನೀತ್ ರಂಗಸ್ವಾಮಿ ನಿರ್ದೇಶನ ಮಾಡಿರುವ ಈ ಚಿತ್ರವು ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಸೆ. 05ರಂದು ಬಿಡುಗಡೆಯಾಗುತ್ತಿದೆ.
ಕರ್ನಾಟಕ-ತಮಿಳುನಾಡು ನಡುವಿನ ಗಡಿಭಾಗದ ಪ್ರೇಮಕಥೆಯಾಗಿರುವ ‘ಏಳುಮಲೆ’ ಸಿನಿಮಾದಲ್ಲಿ ನಟಿ ರಕ್ಷಿತಾ ಸೋದರ ರಾಣಾ ಕನ್ನಡದ ಹುಡ್ಗ ಹರೀಶ್ ಆಗಿ ನಟಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಮನೆ ಮಾತಾಗಿರುವ ಮೈಸೂರಿನ ಹುಡುಗಿ ಪ್ರಿಯಾ ಆಚಾರ್ ತಮಿಳು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
‘ಏಳುಮಲೆ’ ಚಿತ್ರದಲ್ಲಿ ರಾಣಾ, ಪ್ರಿಯಾಂಕಾ ಆಚಾರ್ ಜೊತೆಗೆ ಜಗಪತಿ ಬಾಬು, ನಾಗಾಭರಣ, ಕಿಶೋರ್ ಕುಮಾರ್, ಸರ್ದಾರ್ ಸತ್ಯ, ಜಗಪ್ಪ ಮುಂತಾದವರು ನಟಿಸಿದ್ದಾರೆ.
ಆ ಕೂಲಿಯಿಂದ ಈ ‘ಕೂಲಿ’ಯವರೆಗೂ; ಕರ್ನಾಟಕದ ಗಿಡ, ತಮಿಳುನಾಡಿನಲ್ಲಿ ಮರವಾದ ಕಥೆ …


