ಗಾಯಕಿಯಾದ ಶಿಲ್ಪಾ ಗಣೇಶ್‍; ‘ಪಿಚ್ಚರ್’ ಚಿತ್ರಕ್ಕೆ ಗಾಯನ

ಚಂದನವನ, ಸಿನಿ ಸುದ್ದಿ

ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಶಿಲ್ಪಾ ಗಣೇಶ್ ನಿರ್ಮಿಸಿರುವ ಚಿತ್ರ ‘ಪಿಚ್ಚರ್’. ಸಂದೀಪ ಬೆದ್ರ ನಿರ್ದೇಶನದ ಈ ಚಿತ್ರದ ನಾಯಕರಾಗಿ ನಿತ್ಯಪ್ರಕಾಶ್ ಬಂಟ್ವಾಳ್ ನಟಿಸಿದ್ದಾರೆ. ಈ ಚಿತ್ರದ ವಿಶೇಷವೆಂದರೆ ನಿರ್ಮಾಪಕಿ ಶಿಲ್ಪಾ ಗಣೇಶ್ ‘ಗೋಕುಲದ ರಾಧೆ’ ಎಂಬ ಹಾಡನ್ನು ಕನ್ನಡ ಹಾಗೂ ತುಳು ಎರಡು ಭಾಷೆಗಳಲ್ಲೂ ಹಾಡಿದ್ದಾರೆ. ಈ ಮೂಲಕ ನಿರ್ಮಾಪಕಿಯಾಗಿದ್ದ ಶಿಲ್ಪಾ ಗಣೇಶ್ ಅವರು ಈಗ ಗಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ.

ಆನಂದ್‍ ಆಡಿಯೋದಲ್ಲಿ ಬಿಡುಗಡೆಯಾಗಿರುವ ‘ಗೋಕುಲ ರಾಧೆ’ ಶಿಲ್ಪಾ ಗಣೇಶ್ ಹಾಗೂ ಜಸ್ಕರಣ್ ಸಿಂಗ್ ಈ ಹಾಡನ್ನು‌ ಹಾಡಿದ್ದಾರೆ. ಕನ್ನಡದಲ್ಲಿ ಅರಸು ಅಂತಾರೆ ಹಾಗೂ ತುಳುವಿನಲ್ಲಿ ಕೀರ್ತನ್ ಭಂಡಾರಿ ಈ ಹಾಡನ್ನು ರಚಿಸಿದ್ದಾರೆ. ಸ್ಯಾಮ್ಯುಯೆಲ್ ಅಭಿ ಸಂಗೀತ ನೀಡಿದ್ದಾರೆ. ಕಾಶ್ಮೀರದಲ್ಲಿ ಈ ಹಾಡಿನ ಚಿತ್ರೀಕರಣವಾಗಿದೆ.

ಈ ಚಿತ್ರಕ್ಕೆ ನಿರ್ದೇಶಕ ಸಂದೀಪ್ ಬೆದ್ರ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಹಾಗೂ ಚಂದ್ರಶೇಖರ್ ಕೆ.ಎಸ್ ಅವರ ಛಾಯಾಗ್ರಹಣ, ರಾಜು ಆರ್ಯನ್ ಸಂಕಲನವಿರುವ ಈ ಚಿತ್ರದಲ್ಲಿ ನಿತ್ಯಪ್ರಕಾಶ್ ಬಂಟ್ವಾಳ, ಅಮೃತ ಸುದು, ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರ್, ಸಾಯಿಕೃಷ್ಣ, ವಜ್ರಧೀರ್ ಜೈನ್ ಮುಂತಾದವರು ನಟಿಸಿದ್ದಾರೆ.

ಕೌಟುಂಬಿಕ, ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮನೋರಂಜನೆಯೇ ಪ್ರಧಾನ. ‘ಪಿಕ್ಚರ್‍’ ಚಿತ್ರವು ಜುಲೈ 24ರಂದು ಬಿಡುಗಡೆ ಆಗಲಿದೆ.

90 ಚಿತ್ರಗಳು ಮಾಡದ ಗಳಿಕೆಯನ್ನು ಅದೊಂದೇ ಚಿತ್ರ ಮಾಡಿದೆ!

Discover more from KannadaScreens

Subscribe now to keep reading and get access to the full archive.

Continue reading