ಒಂದು ದಶಕದ ಮೇಲಾಗಿತ್ತು ಪ್ರಜ್ಞಾ ಯಾವುದೋ ಒಂದು ಚಿತ್ರದಲ್ಲಿ ನಟಿಸಿ. ಒಂದು ಕಾಲಕ್ಕೆ ‘ಬಾಬಾ’, ‘ದೇವ್ರು’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ಪ್ರಜ್ಞಾ, ಆ ನಂತರ ಚಿತ್ರರಂಗದಿಂದ ದೂರವೇ ಉಳಿದಿದ್ದರು. ಸುಮಾರು ವರ್ಷಗಳ ನಂತರ ನಟಿ ಪ್ರಜ್ಞಾ, ‘ಅಯೋಗ್ಯ 2’ ಸಿನಿಮಾ ಮೂಲಕ ಚಿತ್ರರಂಗಕ್ಕೆ ವಾಪಸ್ಸಾಗಿದ್ದರೆ.
ಸತೀಶ್ ನೀನಾಸಂ, ರಚಿತಾ ರಾಮ್ ಅಭಿನಯದ ‘ಅಯೋಗ್ಯ 2’ ಚಿತ್ರದ ಮತ್ತೊಂದು ಹಾಡು ಅನಾವರಣಗೊಂಡಿದೆ. ‘ಮುದ್ದು ಮುದ್ದು ಪುಟ್ಟಲಕ್ಷ್ಮಿ …’, ‘ಅಣ್ಣಾ ಬಂದ್ರೆ ಜೋಶ್ ಬತ್ತದೆ …’ ಹಾಗೂ ‘ಹುಡ್ಗೀರ್ ಡೇಂಜರಸ್ …’ ಎಂಬ ಹಾಡುಗಳು ಬಿಡುಗಡೆಯಾಗಿದ್ದವು.
ಚಿತ್ರತಂಡವು ಇದೀಗ ‘ಮಿಲ್ಕಿ ಬ್ಯೂಟಿ …’ ಎಂಬ ಹಾಡನ್ನು ಬಿಡುಗಡೆ ಮಾಡಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿರುವ ಈ ಹಾಡಿಗೆ ‘ಬಹದ್ದೂರ್’ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದಾರೆ. ಇಂದು ನಾಗರಾಜ್, ನಿಶಾನ್ ರೈ ಕಂಠಸಿರಿಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಹರ್ಷ ನೃತ್ಯ ನಿರ್ದೇಶನ ಮಾಡಿದ್ದಾರೆ.

ಈ ಚಿತ್ರವನ್ನು ಎಸ್.ವಿ.ಸಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ಎಂ.ಮುನೇಗೌಡ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಸತೀಶ್ ಮತ್ತು ರಚಿತಾ ಜೊತೆಗೆ ರವಿಶಂಕರ್, ಸಾಧು ಕೋಕಿಲ, ತಬಲ ನಾಣಿ, ಸುಂದರ್ ರಾಜ್, ಶಿವರಾಜ್ ಕೆ.ಆರ್.ಪೇಟೆ, ಅರುಣಾ ಬಾಲರಾಜ್, ಗಿರಿ ಶಿವಣ್ಣ ಹಾಗೂ ಮಂಜು ಪಾವಗಡ ನಟಿಸಿದ್ದಾರೆ. ಮಾಸ್ತಿ ಉಪ್ಪಾರಳ್ಳಿ ಸಂಭಾಷಣೆ, ‘ಶಾಖಾಹಾರಿ’ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದ ವಿಶ್ವಜಿತ್ ರಾವ್ ಈ ಚಿತ್ರದ ಛಾಯಾಗ್ರಾಹಕರು.
ಮಹೇಶ್ ಕುಮಾರ್ ನಿರ್ದೇಶವಿರುವ ಈ ಚಿತ್ರ ಆಗಸ್ಟ್ 7 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.


