ಎರಡು ಪಾತ್ರಗಳ ಸುತ್ತ ಸುತ್ತುವ ‘A DATE’ ಚಿತ್ರದ ‘ಬ್ಯಾಡ್ ಗೈ’ ಹಾಡು ಬಿಡುಗಡೆ

ಚಂದನವನ, ಸಿನಿ ಸುದ್ದಿ

ಒಂದೇ ದಿನದಲ್ಲಿ, ಕೆಲವೇ ಪಾತ್ರಗಳ ಸುತ್ತ ಕೆಲವು ಚಿತ್ರಗಳು ಕನ್ನಡ ಚಿತ್ರರಂಗದಲ್ಲಿ ಇದುವರೆಗೆ ಬಂದಿವೆ. ಆ ಸಾಲಿಗೆ ಸೇರುವ ಇನ್ನೊಂದು ಚಿತ್ರ ‘A DATE’.

ಬೆಂಗಳೂರಿನಲ್ಲಿ ಒಂದೇ ದಿನದ ಅವಧಿಯಲ್ಲಿ ನಡೆಯುವ, ಎರಡು ಪ್ರಮುಖ ಪಾತ್ರಗಳ ಸುತ್ತ ಸಾಗುವ ಈ ಚಿತ್ರಕ್ಕೆ ವಿಮಲ್ ರಾಜ್ ಎನ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರೀಕರಣ ಮತ್ತು ನಂತರದ ತಾಂತ್ರಿಕ ಕಾರ್ಯಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ ಇದೀಗ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದೆ.

ಈ ಮಧ್ಯೆ, ಚಿತ್ರ ‘ಬ್ಯಾಡ್ ಗೈ ಆಂಥಮ್ …’ ಎಂಬ ಹಾಡನ್ನು ಇತ್ತೀಚೆಗೆ ಚಿತ್ರತಂಡ ಬಿಡುಗಡೆ ಮಾಡಿದೆ. ಈಗಿನ ಯುವ ಸಮುದಾಯಕ್ಕೆ ತಲುಪುವ ಸಲುವಾಗ Rap ಶೈಲಿಯಲ್ಲಿರುವ ಈ ಹಾಡಿಗೆ ಸುಜನಿತ್ ಶೆಟ್ಟಿ ಹಾಗೂ ವಿಮಲ್ ರಾಜ್ ಎನ್ ಸಾಹಿತ್ಯ ಬರೆದಿದ್ದಾರೆ. ಮೋಕ್ಷ ಬೀಟ್ಸ್ ಸಂಗೀತ ಸಂಯೋಜನೆ ಇದೆ.

ಮೂಲತಃ ಐಟಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿರುವ ವಿಮಲ್ ರಾಜ್ ಎನ್, ಹಲವು ಕಿರುಚಿತ್ರಗಳನ್ನು ನಿರ್ಮಿಸಿ-ನಿರ್ದೇಶಿಸಿದ್ದಾರೆ. ಇದೇ ಮೊದಲ ಬಾರಿಗೆ ಅವರು ‘A DATE’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದಿದ್ದಾರೆ. ಸುಜನಿತ್ ಶೆಟ್ಟಿ ಮತ್ತು ಅಶ್ವಿನಿ ಶೆಣೈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಬೆಂಗಳೂರಿನ 55ಕ್ಕೂ ಹೆಚ್ಚು ನೈಜ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ನಗರವೂ ಚಿತ್ರದ ಪ್ರಮುಖ ಪಾತ್ರವೊಂದರಂತೆ ಮೂಡಿಬಂದಿದೆ. ವೀಕೆಂಡ್ ಶಾರ್ಟ್ಸ್ ಸ್ಟುಡಿಯೋ ಬ್ಯಾನರ್ನಡಿ ಸಮಾನ ಮನಸ್ಕರ ತಂಡ ಈ ಚಿತ್ರವನ್ನು ನಿರ್ಮಿಸಿದೆ. ಚಿತ್ರಕ್ಕೆ ಮೋಕ್ಷ ಬೀಟ್ಸ್ ಸಂಗೀತ, ವಡ್ಡೆ ದೇವೇಂದ್ರ ರೆಡ್ಡಿ ಛಾಯಾಗ್ರಹಣ, ವಿಮಲ್ ರಾಜ್ ಎನ್ ಸಂಕಲನ ಈ ಚಿತ್ರಕ್ಕಿದೆ.

ಹಣ, ಜನಪ್ರಿಯತೆ ಎಲ್ಲಾ ಇದೆ; ಕೆಲಸ ಮಾತ್ರ ಇಲ್ಲ …

Discover more from KannadaScreens

Subscribe now to keep reading and get access to the full archive.

Continue reading